Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕನೇ, ನನ್ನ ಮಗನನ್ನು ಕಟಾಕ್ಷಿಸು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ಕಟಾಕ್ಷಿಸಿರಿ, ನನಗೆ ಇವನೊಬ್ಬನೇ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಗ ಆ ಗುಂಪಿನಲ್ಲಿ ಒಬ್ಬನು - ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡಬೇಕು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಇವನೊಬ್ಬನೇ ಮಗನು. ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಗುಂಪಿನಲ್ಲಿದ್ದ ಒಬ್ಬ ಮನುಷ್ಯನು, “ಉಪದೇಶಕನೇ, ದಯಮಾಡಿ ಬಂದು ನನ್ನ ಮಗನನ್ನು ನೋಡು. ನನಗೆ ಅವನೊಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತ್ಯಾ ತಾಂಡ್ಯಾತ್ನಾ ಎಕ್ ಮಾನ್ಸಾನ್,“ಗುರುಜಿ, ಮಾಜ್ಯಾ ಲೆಕಾಕ್ ಬಗಾ,ಮಾಜೊ ಎಕ್ಲೊಚ್ ಲೆಕ್ ತೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:38
8 ತಿಳಿವುಗಳ ಹೋಲಿಕೆ  

ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.


ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.


ನಾವು ‘ನಮಗೆ ಮುದುಕನಾದ ತಂದೆಯಿದ್ದಾನೆ, ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಒಬ್ಬ ಚಿಕ್ಕ ಮಗನೂ ಇದ್ದಾನೆ, ಅವನ ಒಡಹುಟ್ಟಿದವನು ಸತ್ತು ಹೋಗಿದ್ದಾನೆ. ಆದುದರಿಂದ ಅವನ ತಾಯಿಯಲ್ಲಿ ಹುಟ್ಟಿದವರೊಳಗೆ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಬಹಳ ಪ್ರೀತಿಯುಂಟು’ ಎಂದು ಹೇಳಿದೆವು.


ಮರುದಿನ ಅವರು ಬೆಟ್ಟದಿಂದ ಇಳಿದು ಬಂದಾಗ ಜನರ ದೊಡ್ಡ ಗುಂಪೊಂದು ಆತನನ್ನು ಎದುರುಗೊಂಡಿತು.


ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು