Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ನೀವು ಯಾವ ಮನೆಯಲ್ಲಿ ಇಳುಕೊಂಡರೂ ಅಲ್ಲೇ ಇರ್ರಿ. ಅಲ್ಲಿಂದಲೇ ಹೊರಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಒಂದು ಮನೆಯಲ್ಲಿ ಇಳಿದುಕೊಂಡಾಗ, ಆ ಊರನ್ನು ಬಿಟ್ಟುಹೋಗುವ ಸಮಯದವರೆಗೂ ಅಲ್ಲೇ ತಂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖಲ್ಯಾ ಘರಾತ್ ತುಮ್ಕಾ ಸ್ವಾಗತ್ ಕರ್‍ತ್ಯಾತ್, ತೆ ಶಾರ್ ಸೊಡುನ್ ಜಾಯ್ ಪತರ್ ತ್ಯಾಚ್ ಘರಾತ್ ರ್‍ಹಾವಾ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:4
6 ತಿಳಿವುಗಳ ಹೋಲಿಕೆ  

ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.


ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು