ಲೂಕ 9:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ? ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತನ್ನಾ ಜೆಜುನ್ “ಕವ್ಡೆ ಕಮಿ ವಿಶ್ವಾಸಾಚಿ ಲೊಕಾ ತುಮಿ? ಅನಿ ಕೌಡೆಪತರ್ ಮಿಯಾ ತುಮ್ಚ್ಯಾ ವಾಂಗ್ಡಾ ರಾವ್ಚೆ? ಅನಿ ಕವ್ಡೊ ಎಳ್ ಮಿಯಾ ತುಮ್ಕಾ ಸೊಸುನ್ ಘೆವ್ನ್ ಜಾವ್ಚೆ?” ಮಟ್ಲ್ಯಾನ್. ಮಾನಾ ತ್ಯಾ ಮಾನ್ಸಾಕ್ “ತುಜ್ಯಾ ಲೆಕಾಕ್ ಹಿಕ್ಡಿ ಘೆವ್ನ್ ಯೆ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |