Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 “ಮಿಯಾ ತುಮ್ಕಾ ಸಾಂಗ್ತಲೆ ಯಾದ್ ಥವ್ನ್ ಘೆವಾ, ಮಾನ್ಸಾಚ್ಯಾ ಲೆಕಾಕ್ ಮಾನ್ಸಾಂಚ್ಯಾ ಅದಿಕಾರಾತ್ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:44
26 ತಿಳಿವುಗಳ ಹೋಲಿಕೆ  

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ಆದರೆ ಅವರ ಕಾಲ ಬಂದಾಗ ಆತನು ನಮಗೆ ಇಂಥಿಂಥದ್ದನ್ನು ಹೇಳಿದನಲ್ಲಾ ಎಂದು ನಿಮ್ಮ ನೆನಪಿಗೆ ಬರುವಂತೆ, ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಈ ಸಂಗತಿಗಳನ್ನು ಕೇಳಿದವರೆಲ್ಲರೂ, “ಆಹಾ, ಈ ಕೂಸು ಎಂಥವನಾಗುವನೋ?” ಅಂದುಕೊಂಡರು, ಆದರೆ ಕರ್ತನ ಅಭಯ ಹಸ್ತವು ಅವನ ಮೇಲೆ ಇತ್ತು.


ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.


ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.


ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.


ಅದಕ್ಕೆ ಯೇಸು, “ಈಗ ನೀವು ನಂಬುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು