ಲೂಕ 9:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ಖರೆ ಶಿಸಾಕ್ನಿ ತೊ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಕಳುಕ್ ನಾ, ಹೆ ತೆಂಕಾ ತವ್ಡೆ ಸೊಡ್ಸುನ್ ಸಾಂಗಲ್ಲೆ ನತ್ತೆ, ತಸೆ ಮನುನ್ ತೆಂಕಾ ಕಾಯ್ಬಿ ಕಳುಕ್ ನಾ. ಅನಿ ಕಾಯ್ ಮನುನ್ ಇಚಾರುಕ್‍ಬಿ ತೆಂಕಾ ಧೈರೊ ಹೊವುಕ್ನಾ”. ಅಧ್ಯಾಯವನ್ನು ನೋಡಿ |