Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖೈ ತರ್ ತುಮ್ಕಾ ಸ್ವಾಗತ್ ಕರಿನಸ್ಲ್ಯಾರ್, ತೆ ಶಾರ್ ಸೊಡುನ್ ಚಲಾ. ಜಾತಾನಾ ತುಮ್ಚ್ಯಾ ತಳ್‍ಪಾಯಾಚಿ ಮಾಟಿ ಫಾಪ್ಡಾ, ಹೆ ತೆಂಕಾ ಎಕ್ ಸಾಕ್ಷಿ ಹೊಂವ್ದಿ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:5
13 ತಿಳಿವುಗಳ ಹೋಲಿಕೆ  

ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.


ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.


“ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.


ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.


ಇದಲ್ಲದೆ ಆ ಊರಿನಿಂದ ಹೊರಡುವ ತನಕ ನೀವು ಯಾವ ಮನೆಯಲ್ಲಿ ಇಳಿದುಕೊಂಡಿರುವಿರೋ, ಆ ಮನೆಯಲ್ಲೇ ಉಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು