Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಯೇಸು ಅವನಿಗೆ, “ಅಡ್ಡಿಮಾಡಬೇಡಿರಿ; ನಿಮಗೆ ವಿರುದ್ಧವಲ್ಲದವನು ನಿಮ್ಮ ಪಕ್ಷದವನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಯೇಸು ಅವನಿಗೆ - ಅಡ್ಡಿಮಾಡಬೇಡಿರಿ; ನಿಮ್ಮನ್ನು ಎದುರಿಸದವನು ನಿಮ್ಮ ಪಕ್ಷದವನೇ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿ. ಏಕೆಂದರೆ, ನಿಮಗೆ ವಿರೋಧವಾಗಿಲ್ಲದವನು ನಿಮ್ಮವನೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ತನ್ನಾ ಜೆಜುನ್ ಶಿಸಾಕ್ನಿ “ತೆಕಾ ಅಡ್ವುಕ್ ಜಾವ್ನಕಾಸಿ, ಕಶ್ಯಾಕ್ ಮಟ್ಲ್ಯಾರ್, ಜೆ ಕೊನ್ ಅಮ್ಚ್ಯಾ ವಿರೊದ್ ನಾ ತೊ ಅಮ್ಚೊಚ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:50
12 ತಿಳಿವುಗಳ ಹೋಲಿಕೆ  

ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.


ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.


ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂ ಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.


ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.


ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ.


ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.


ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು