ಲೂಕ 9:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಜೆಜುಕ್ ಸರ್‍ಗಾಕ್ ಘೆವ್ನ್ ಜಾತಲೊ ಎಳ್ ಜಗ್ಗೊಳ್-ಯೆವ್ನ್ಗೆತ್ ಹೊತ್ತೊ, ಜೆಜುನ್ ಅಪ್ನಾಚೆ ಮನ್ ಘಟ್ ಕರುನ್ ಘೆಟ್ಲ್ಯಾನ್, ಅನಿ ತೊ ಅಪ್ಲಿ ವಾಟ್ ಧರುನ್ ಜೆರುಜಲೆಮಾಕ್ ಜಾವ್‍ಲಾಗಲ್ಲೊ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.