Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:59 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

59 ಆತನು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

59 ತನ್ನಾ ಅನಿಎಕ್ ಮಾನ್ಸಾಕ್ ಜೆಜುನ್ “ತಿಯಾ ಮಾಜ್ಯಾ ಫಾಟ್ನಾ ಯೆ!” ಮಟ್ಲ್ಯಾನ್. ಖರೆ ತೆನಿ “ಗುರುಜಿ, ಅದ್ದಿ ಮಿಯಾ ಜಾವ್ನ್ ಮಾಜ್ಯಾ ಬಾಬಾಕ್ ಮಾಟಿ ದಿವ್ನ್ ಯೆತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:59
8 ತಿಳಿವುಗಳ ಹೋಲಿಕೆ  

ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಸಮಯವು ಇನ್ನು ಬಂದಿಲ್ಲ” ಎಂದು ಜನರು ಅಂದುಕೊಳ್ಳುತ್ತಾರಲ್ಲಾ.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು