Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆಂದು ಕೆಲವರೂ ಹೇಳಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಉಲ್ಲೆ ಜಾನಾ ಎಲಿಯಾ ಪ್ರವಾದಿ ಮನಿತ್, ಅನಿ ಉಲ್ಲೆಜಾನ್, ಅದ್ಲ್ಯಾ ಪ್ರವಾದ್ಯಾನಿತ್ಲೊ ಎಕ್ಲೊ ಝಿತ್ತೊ ಹೊವ್ನ್ ಯೆಲಾ ಮನುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:8
6 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.


ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.


ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.


ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.


ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.


ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು