Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:11
21 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಮೋಶೆಯು ದೊಡ್ಡವನಾದ ಮೇಲೆ, ಸ್ವಜನರ ಬಳಿಗೆ ಹೋಗಿ ಅವರ ಬಿಟ್ಟೀಕೆಲಸಗಳನ್ನು ನೋಡುತ್ತಿದ್ದನು. ಆಗ ಒಬ್ಬ ಐಗುಪ್ತ್ಯದವನು ತನ್ನ ಸ್ವಂತ ಜನರಾದ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಹೊಡೆಯುವುದನ್ನು ಕಂಡನು.


ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.


“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.


ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.


ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.


ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರಕ್ಕೆ ಎದುರಾಗಿ ಯಾರು ನಿಂತಾರು?


ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವುದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ್ದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಭದ್ರಪಡಿಸಿದನು.


ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.


ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?


ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.


ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.


ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಾಯೇಲ್ಯರ ಪಟ್ಟಣಗಳಿಗೆ ವಿರುದ್ಧವಾಗಿ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್, ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲಾ ಉಗ್ರಾಣಗಳನ್ನೂ ಹಾಳು ಮಾಡಿದರು.


“ನಮ್ಮ ಯೌವನ ಕಾಲದಿಂದ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆ” ಎಂದು ಇಸ್ರಾಯೇಲರು ಹೇಳಲಿ.


ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.


“ನಾವು ಯೌವನ ಕಾಲದಿಂದ ಎಷ್ಟೋ ಸಾರಿ ಬಾಧೆ ಹೊಂದಿದರೂ, ಅವರು ನಮ್ಮನ್ನು ಜಯಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು