Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ದೇವರಿಗೆ ಭಯಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯನ್ನುಂಟುಮಾಡಿದನು. ಇದಲ್ಲದೆ ಇಸ್ರಾಯೇಲ್ಯರು ಹೆಚ್ಚಿ ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸೂಲಗಿತ್ತಿಯರು ದೇವರಿಗೆ ಭಯಪಟ್ಟದ್ದರಿಂದ, ದೇವರು ಅವರ ಕುಟುಂಬಕ್ಕೆ ಅಭಿವೃದ್ಧಿಯನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:21
14 ತಿಳಿವುಗಳ ಹೋಲಿಕೆ  

ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.


ನನ್ನ ಹೃದಯದ ಹಾಗೂ ಮನಸ್ಸಿನ ಆಲೋಚನೆಗಳನ್ನು ನೆರವೇರಿಸುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತ ಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.’


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.


ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಯೆಹೋವನ ಆಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು” ಎಂಬುದೇ.


ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.


ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು