Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಕೋಬನ ಸಂತತಿಯವರೆಲ್ಲರು ಎಪ್ಪತ್ತು ಮಂದಿ. ಜೋಸೆಫನು ಈಗಾಗಲೇ ಈಜಿಪ್ಟಿನಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯಾಕೋಬನಿಂದ ಹುಟ್ಟಿದವರೆಲ್ಲರು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:5
7 ತಿಳಿವುಗಳ ಹೋಲಿಕೆ  

ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.


ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.


ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.


ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.


ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.


ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು