Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವು ಭೂವಿುಯನ್ನೆಲ್ಲಾ ಮುಚ್ಚಿಕೊಂಡದ್ದರಿಂದ ನೆಲವು ಕಾಣದೆಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ ಅಡವಿಯ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:15
11 ತಿಳಿವುಗಳ ಹೋಲಿಕೆ  

ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.


ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.


ಅವು ದೇಶದ ಹುಲ್ಲನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು, “ಕರ್ತನಾದ ಯೆಹೋವನೇ, ಲಾಲಿಸು, ನನ್ನನ್ನು ಕ್ಷಮಿಸು. ಯಾಕೋಬ ಜನಾಂಗವು ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ” ಎಂದು ವಿಜ್ಞಾಪಿಸಿಕೊಂಡೆನು.


ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.


ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು