Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:21
23 ತಿಳಿವುಗಳ ಹೋಲಿಕೆ  

ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.


ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.


ಹನ್ನೆರಡು ಗಂಟೆಯಿಂದ ಮೂರು ಗಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.


ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.


ನೀವು ಕುರುಡರಂತೆ ಮಧ್ಯಾಹ್ನದಲ್ಲಿಯೂ ಕತ್ತಲಾಯಿತೆಂದು ತಡವರಿಸುತ್ತಾ ಇರುವಿರಿ; ನೀವು ಮಾಡುವ ಯಾವ ಕೆಲಸವೂ ಕೈಗೂಡುವುದಿಲ್ಲ. ಅನ್ಯರು ಯಾವಾಗಲೂ ನಿಮ್ಮನ್ನು ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು; ತಪ್ಪಿಸುವವರು ಯಾರೂ ಇರುವುದಿಲ್ಲ.


ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.


ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.


ಕತ್ತಲೆಯೂ, ಜಾರಿಕೆಯೂ ಇರುವ ದಾರಿಯಲ್ಲಿ ಯೆಹೋವನ ದೂತನು ಅವರನ್ನು ಹಿಂದಟ್ಟಲಿ.


ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.


ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.


ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ನಿಮ್ಮ ಮುಂದೆ ಮಾರ್ಗದರ್ಶಕನಾಗಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ, ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮವನಾಗಿ ಯುದ್ಧಮಾಡುವನು.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು