Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:3
28 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.


ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು” ಎಂದು ಹೇಳಿದನು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ನಾನು ಕರೆದಾಗ ನೀವು ತಿರಸ್ಕರಿಸಿದಿರಿ. ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.


“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?


ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.


‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’


ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.


“ಬೇಲ್ಶಚ್ಚರನೇ, ಅವನ ಮಗನಾದ ನೀನು ಇದನ್ನೆಲ್ಲಾ ತಿಳಿದುಕೊಂಡರೂ ನಿನ್ನ ಮನಸ್ಸನ್ನು ತಗ್ಗಿಸಿಕೊಳ್ಳಲಿಲ್ಲ.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು