ವಿಮೋಚನಕಾಂಡ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು. ಅಧ್ಯಾಯವನ್ನು ನೋಡಿ |