Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ, “ಫರೋಹನಿಗೂ ಮತ್ತು ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆ ಕೊಡುವನು. ಮಾತ್ರವಲ್ಲದೆ ನಿಮ್ಮೆಲ್ಲರನ್ನು ಬಲವಂತದಿಂದ ಕಳುಹಿಸಿ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಇಂತೆಂದನು - ಫರೋಹನಿಗೂ ಐಗುಪ್ತ್ಯರಿಗೂ ಇನ್ನೊಂದು ಉಪದ್ರವವನ್ನು ಬರಮಾಡುತ್ತೇನೆ; ಅದು ಬಂದ ನಂತರ ಅವನು ನಿಮಗೆ ಇಲ್ಲಿಂದ ಹೋಗುವದಕ್ಕೆ ಅಪ್ಪಣೆಕೊಡುವದು ಮಾತ್ರವಲ್ಲದೆ ನಿಮ್ಮೆಲ್ಲರನ್ನು ಅಟ್ಟಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ, “ಇನ್ನು ಒಂದೇ ಉಪದ್ರವವನ್ನು ಫರೋಹನ ಮೇಲೆಯೂ, ಈಜಿಪ್ಟ್ ಮೇಲೆಯೂ ಬರಮಾಡುವೆನು. ಆಮೇಲೆ ಅವನು ಇಲ್ಲಿಂದ ಕಳುಹಿಸುವನು. ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲರನ್ನೂ ಕಳುಹಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:1
11 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.


ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.


ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.


ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು.


ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.


ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.


ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.


ಜನರು, “ನಾವು ಪ್ರಾಯಶ್ಚಿತ್ತಾರ್ಥವಾಗಿ ಏನು ಕಳುಹಿಸಬೇಕು?” ಎಂದು ಕೇಳಲು ಅವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ಪ್ರಭುಗಳ ಸಂಖ್ಯೆಗೆ ಸರಿಯಾಗಿ ಬಂಗಾರದ ಐದು ಗಡ್ಡೆಗಳನ್ನೂ, ಬಂಗಾರದ ಐದು ಇಲಿಗಳನ್ನು ಮಾಡಿಸಬೇಕು.


ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು