ವಿಮೋಚನಕಾಂಡ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೋಶೆ ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದಾಗ್ಯೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಫರೋಹನು ಇಸ್ರಾಯೇಲ್ಯರಿಗೆ ತನ್ನ ದೇಶವನ್ನು ಬಿಟ್ಟು ಹೊರಡುವದಕ್ಕೆ ಅಪ್ಪಣೆ ಕೊಡದೆಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ. ಅಧ್ಯಾಯವನ್ನು ನೋಡಿ |