Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಫರೋಹನಿಗೆ ಇಂತೆಂದನು: “ಸರ್ವೇಶ್ವರ ಮಾಡಿರುವ ಅಪ್ಪಣೆ ಇದು: ‘ನಡುರಾತ್ರಿಯ ವೇಳೆಯಲ್ಲಿ ನಾನೇ ಈಜಿಪ್ಟಿನವರ ನಡುವೆ ಹಾದುಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆ ಫರೋಹನಿಗೆ - ಯೆಹೋವನು ಅಪ್ಪಣೆ ಮಾಡುವದೇನಂದರೆ - ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೋಶೆಯು ಜನರಿಗೆ, “ಯೆಹೋವನು ಹೀಗೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮೋಶೆಯು ಫರೋಹನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸುಮಾರು ಮಧ್ಯರಾತ್ರಿಯಲ್ಲಿ ನಾನು ಈಜಿಪ್ಟಿನ ಮಧ್ಯದಲ್ಲಿ ಹಾದು ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:4
12 ತಿಳಿವುಗಳ ಹೋಲಿಕೆ  

ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.


“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.


ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?


ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.


ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.


ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.


ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.


ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.


ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.


ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.


ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು