ವಿಮೋಚನಕಾಂಡ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬದು ನಿಮಗೆ ತಿಳಿಯುವಂತೆ ಇಸ್ರಾಯೇಲ್ಯರಲ್ಲಿರುವ ಮನುಷ್ಯರ ಮೇಲಾಗಲಿ ಪಶುಗಳ ಮೇಲಾಗಲಿ ಒಂದು ನಾಯಿಯಾದರೂ ಬೊಗಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’ ಅಧ್ಯಾಯವನ್ನು ನೋಡಿ |