ವಿಮೋಚನಕಾಂಡ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ನಿನ್ನ ಪರಿವಾರದವರೆಲ್ಲರೂ, ನನ್ನ ಬಳಿಗೆ ಬಂದು ಅಡ್ಡಬಿದ್ದು, ‘ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟು ಹೋಗಬೇಕು’ ಎಂದು ಬೇಡುವರು. ಆ ಮೇಲೆ ನಾನು ಹೊರಟುಹೋಗುವೆನು” ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕೋಪಾವೇಶವುಳ್ಳವನಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ನಿನ್ನ ಪರಿವಾರದವರಾದ ಇವರೆಲ್ಲರೂ ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀನೂ ನಿನ್ನ ಅಧೀನದಲ್ಲಿರುವ ಜನರೆಲ್ಲರೂ ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡುವರು; ಆಮೇಲೆ ನಾನು ಹೊರಟುಹೋಗುವೆನು ಎಂದು ಹೇಳಿದನು. ಮೋಶೆ ಈ ಮಾತನ್ನು ಹೇಳಿ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿ |