Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:15
28 ತಿಳಿವುಗಳ ಹೋಲಿಕೆ  

ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.


ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.


ಆದರೆ ಯಾವನಾದರೂ ಶುದ್ಧನಾಗದೆ, ಪ್ರಯಾಣಮಾಡದೆ ಇದ್ದು ಪಸ್ಕಹಬ್ಬವನ್ನು ಆಚರಿಸಲು ತಪ್ಪಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಯೆಹೋವನಿಂದ ನೇಮಿತವಾದ ಯಜ್ಞವನ್ನು ನೇಮಕವಾದ ಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.


ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


“ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.


ನಿಮ್ಮನ್ನು ಕಳವಳಪಡಿಸುವವರು ತಮ್ಮನೇ ತಾವು ಅಂಗಚ್ಛೇದನೆಯನ್ನಾದರೂ ಮಾಡಿಕೊಂಡರೆ ಚೆನ್ನಾಗಿತ್ತು.


ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.


ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.


ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ,


ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಹಬ್ಬದ ದಿನಗಳನ್ನು ಮುಗಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇಮಿನಲ್ಲಿಯೇ ಉಳಿದುಕೊಂಡನು. ಅವನ ತಂದೆತಾಯಿಗಳು ಅದನ್ನು ತಿಳಿಯದೆ,


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”


ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.


ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು