Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಮೋಶೆಯು ಇಸ್ರಾಯೇಲರ ಹಿರಿಯರೆಲ್ಲರನ್ನೂ ಕರೆಯಿಸಿ ಅವರಿಗೆ, “ನೀವು, ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಮಂದೆಯಿಂದ ಮರಿಗಳನ್ನು ಆರಿಸಿಕೊಂಡು ಪಸ್ಕಹಬ್ಬಕ್ಕೆ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮೋಶೆ ಇಸ್ರಯೇಲರ ಹಿರಿಯರೆಲ್ಲರನ್ನು ಕರೆಯಿಸಿ ಅವರಿಗೆ, “ನೀವು ನಿಮ್ಮ ನಿಮ್ಮ ಕುಟುಂಬಗಳಿಗಾಗಿ ಹಿಂಡಿನಿಂದ ಮರಿಗಳನ್ನು ಆರಿಸಿಕೊಂಡು ಪಾಸ್ಕ ಹಬ್ಬಕ್ಕೆ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಮೋಶೆಯು ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡ ಕರಸಿ ಅವರಿಗೆ - ನೀವು ನಿಮ್ಮ ನಿಮ್ಮ ಕುಟುಂಬಗಳಿಗೋಸ್ಕರ ಹಿಂಡಿನಿಂದ ಮರಿಗಳನ್ನು ತೆಗೆದುಕೊಂಡು ಪಸ್ಕ ಹಬ್ಬಕ್ಕೆ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯರನ್ನು ಕರೆದು ಅವರಿಗೆ, “ನಿಮ್ಮ ಕುಟುಂಬಗಳ ಪ್ರಕಾರ ಕುರಿಗಳನ್ನು ಆಯ್ದುಕೊಂಡು ಪಸ್ಕಹಬ್ಬಕ್ಕಾಗಿ ಕೊಯ್ಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:21
18 ತಿಳಿವುಗಳ ಹೋಲಿಕೆ  

ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.


ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.


ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.


ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.


ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.


ಆ ಭೋಜನವನ್ನು ಮಾಡಬೇಕಾದ ಕ್ರಮ ಹೇಗೆಂದರೆ: ನೀವು ನಡುವನ್ನು ಕಟ್ಟಿಕೊಂಡು, ಕೆರವನ್ನು ಮೆಟ್ಟಿಕೊಂಡು, ಕೋಲುಹಿಡಿದು, ತ್ವರೆಯಾಗಿ ಮಾಡಬೇಕು. ಇದು ಯೆಹೋವನಿಗೆ ಆಚರಿಸತಕ್ಕ ಪಸ್ಕಹಬ್ಬವು.


ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.


ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.


ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.


ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು