ವಿಮೋಚನಕಾಂಡ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು. ಅಧ್ಯಾಯವನ್ನು ನೋಡಿ |