Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ಕೈಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ತಮ್ಮ ವಾಗ್ದಾನದ ಮೇರೆಗೆ ನಿಮಗೆ ಕೊಡುವ ನಾಡಿಗೆ ನೀವು ಸೇರಿದಾಗ ಈ ವಿಧಿಯನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ತನ್ನ ಮಾತಿನ ಮೇರೆಗೆ ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಈ ಆಚಾರವನ್ನು ನಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಕೊಡುವೆನೆಂದು ಪ್ರಮಾಣ ಮಾಡಿದ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ನೀವು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:25
11 ತಿಳಿವುಗಳ ಹೋಲಿಕೆ  

ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.


ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ,


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.


ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು