Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕುಟುಂಬವು ಚಿಕ್ಕದಾಗಿದ್ದರೆ, ಒಂದು ಕುರಿಮರಿಯನ್ನು ಪೂರ್ಣವಾಗಿ ತಿನ್ನುವುದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದವರೊಂದಿಗೆ ಸೇರಿ, ಒಬ್ಬೊಬ್ಬನು ಎಷ್ಟೆಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕುಟುಂಬವು ಚಿಕ್ಕದಾಗಿದ್ದು ಪೂರಾ ಒಂದು ಮರಿಯನ್ನು ತಿನ್ನುವದಕ್ಕೆ ಆಗದೆ ಹೋದ ಪಕ್ಷಕ್ಕೆ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಗೊತ್ತುಮಾಡಿಕೊಂಡು ಜನಗಳ ಸಂಖ್ಯಾನುಸಾರ ಮರಿಗಳನ್ನು ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಕುರಿಮರಿಯನ್ನು ಪೂರ್ತಿಯಾಗಿ ತಿನ್ನುವುದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ, ತನ್ನ ಮನೆಗೆ ಸಮೀಪವಾಗಿರುವ ತನ್ನ ನೆರೆಯವನ ಕುಟುಂಬದಲ್ಲಿ ಲೆಕ್ಕನೋಡಿ ಅವರೊಂದಿಗೆ ಪಾಲು ಹೊಂದಲಿ. ಒಬ್ಬೊಬ್ಬನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:4
4 ತಿಳಿವುಗಳ ಹೋಲಿಕೆ  

ಇದರ ವಿಷಯದಲ್ಲಿ ನೀವು ಇಸ್ರಾಯೇಲರ ಸಮೂಹಕ್ಕೆಲ್ಲಾ ಹೀಗೆ ಅಪ್ಪಣೆಮಾಡಬೇಕು, ‘ಈ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ತೆಗೆದುಕೊಳ್ಳಬೇಕು.


ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?


ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು