Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:41
29 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.


ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.


ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.


ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.


ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.


ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.


ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ನಾನು ನಿಮ್ಮನ್ನು ಐಗುಪ್ತ ದೇಶದಿಂದ ಬರಮಾಡಿದಾಗ ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಯೆಹೋವನು’” ಅಂದನು.


ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.


ಮೋಶೆ ಮತ್ತು ಆರೋನರ ಕೈಕೆಳಗೆ ಐಗುಪ್ತ ದೇಶದೊಳಗಿಂದ ಸೈನ್ಯಸೈನ್ಯವಾಗಿ ಹೊರಟ ಇಸ್ರಾಯೇಲರ ಪ್ರಯಾಣಗಳ ವಿವರ:


ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,


ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.


ತರುವಾಯ ನಾನು ಮೋಶೆ, ಆರೋನರನ್ನೂ ಕಳುಹಿಸಿ, ಆ ಐಗುಪ್ತದಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ, ಅವರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆನು.


ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.


ಯೆಹೋವನು ಕೂಷ್ಯರನ್ನು ಆಸನಿಂದಲೂ ಯೆಹೂದ್ಯರಿಂದಲೂ ಅಪಜಯ ಉಂಟಾಗುವಂತೆ ಮಾಡಿದನು.


ಇಸ್ರಾಯೇಲರು ಐಗುಪ್ತ ದೇಶವನ್ನೂ, ಯಾಕೋಬನ ಮನೆತನದವರು ಅನ್ಯಜನಾಂಗವನ್ನು ಬಿಟ್ಟ ಮೇಲೆ,


ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು