ವಿಮೋಚನಕಾಂಡ 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು. ಅಧ್ಯಾಯವನ್ನು ನೋಡಿ |