Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಪ್ರಮಾಣವಚನದ ಮೇರೆಗೆ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:11
7 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.


ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.


ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?


ಹೀಗೆ ಆತನು ತನ್ನ ಪರಿಶುದ್ಧ ವಚನವನ್ನೂ, ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು