Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:14
29 ತಿಳಿವುಗಳ ಹೋಲಿಕೆ  

ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಜನರು ವಂಶ ಪಾರಂಪರ್ಯವಾಗಿ ನಿನ್ನ ಕೃತ್ಯಗಳನ್ನು ಹೊಗಳುವರು, ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವರು.


ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದ್ದೇವಷ್ಟೇ, ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ನಿಮಗೇನು ಪಾಲಿದೆ?’


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು.


ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿ ಕೊಡುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆಗಳಿಲ್ಲದ್ದು, ಕುರಿಗಳಲ್ಲಿ ಕಪ್ಪಿಲ್ಲದ್ದು, ನನ್ನ ಬಳಿಯಲ್ಲಿ ಸಿಕ್ಕಿದರೆ ಅದನ್ನು ಕದ್ದದ್ದೆಂದು ಎಣಿಸಬಹುದು” ಎಂದನು.


“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.


ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.


ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.


ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.


ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.


ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವುದೇನೆಂದರೆ ‘ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರೆತಂದೆನು.


ಆತನ ಸೇವಕನಾದ ಇಸ್ರಾಯೇಲಿನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ಆತನ ಅದ್ಭುತ ಕಾರ್ಯಗಳನ್ನು,


“ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.


“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು