ವಿಮೋಚನಕಾಂಡ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಸರ್ವೇಶ್ವರ ಈಜಿಪ್ಟಿನಲ್ಲಿದ್ದ ಚೊಚ್ಚಲು ಮಕ್ಕಳನ್ನು ಹಾಗು ಪಶುಪ್ರಾಣಿಗಳ ಚೊಚ್ಚಲು ಮರಿಗಳನ್ನೂ ಅಂತೂ ಈ ದೇಶದಲ್ಲಿ ಚೊಚ್ಚಲಾಗಿದ್ದುದೆಲ್ಲವನ್ನು ಸಂಹಾರ ಮಾಡಿದರು. ಆದಕಾರಣ ಗಂಡಾದ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಸರ್ವೇಶ್ವರನಿಗೆ ಸಮರ್ಪಿಸುತ್ತೇವೆ. ಮನುಷ್ಯರಿಗೆ ಹುಟ್ಟಿದ ಪ್ರಥಮ ಗರ್ಭಫಲವನ್ನಾದರೋ ಬದಲು ಕೊಟ್ಟು ಬಿಡಿಸಿಕೊಳ್ಳುತ್ತೇವೆ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈಜಿಪ್ಟಿನಲ್ಲಿ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡು ನಮ್ಮನ್ನು ಕಳುಹಿಸಿಕೊಡಲಿಲ್ಲ. ಆಗ ಯೆಹೋವನು ಆ ದೇಶದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. (ಯೆಹೋವನು ಚೊಚ್ಚಲು ಪಶುಗಳನ್ನು ಮತ್ತು ಚೊಚ್ಚಲು ಗಂಡುಮಕ್ಕಳನ್ನು ಕೊಂದನು.) ಆದ್ದರಿಂದ ನಾವು ಚೊಚ್ಚಲಾದ ಪ್ರತಿಯೊಂದು ಗಂಡುಪಶುವನ್ನು ಯೆಹೋವನಿಗೆ ಯಜ್ಞವಾಗಿ ಅರ್ಪಿಸುತ್ತೇವೆ. ಈ ಕಾರಣದಿಂದಲೇ, ನಮ್ಮ ಪ್ರತಿಯೊಂದು ಗಂಡುಮಗುವನ್ನು ಯೆಹೋವನಿಂದ ಮತ್ತೆ ಖರೀದಿ ಮಾಡುತ್ತೇವೆ’ ಎಂದು ಹೇಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಫರೋಹನು ಹಟಮಾರಿತನದಿಂದ ನಮ್ಮನ್ನು ಕಳುಹಿಸದೆ ಇದ್ದಾಗ, ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಎಂದರೆ, ಮನುಷ್ಯರ ಹಾಗೂ ಪಶುಪ್ರಾಣಿಗಳ ಚೊಚ್ಚಲಾದವುಗಳನ್ನು ಕೊಂದುಹಾಕಿದರು. ಆದ್ದರಿಂದ ಚೊಚ್ಚಲ ಗಂಡುಗಳನ್ನೆಲ್ಲಾ ಯೆಹೋವ ದೇವರಿಗೆ ಅರ್ಪಿಸುತ್ತೇವೆ. ನಮ್ಮ ಪುತ್ರರಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇವೆ,’ ಅಧ್ಯಾಯವನ್ನು ನೋಡಿ |