Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಲ್ಲಿ ಹುಟ್ಟಿದ ಚೊಚ್ಚಲು ಗಂಡುಮಕ್ಕಳೆಲ್ಲಾ ನನಗೆ ಮೀಸಲಾಗಿರಬೇಕು; ಪ್ರತಿಯೊಬ್ಬ ಚೊಚ್ಚಲು ಮಗನು ನನ್ನವನೇ. ಪ್ರತಿಯೊಂದು ಚೊಚ್ಚಲು ಪಶುವು ನನ್ನದೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:2
19 ತಿಳಿವುಗಳ ಹೋಲಿಕೆ  

ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು.


ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.


ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಅವರು ಯೆಹೋವನಿಗೆ ಸಮರ್ಪಿಸುವ ಸಕಲಪ್ರಾಣಿಗಳಲ್ಲಿ ಚೊಚ್ಚಲಾದದ್ದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲಮಕ್ಕಳಿಗೂ, ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


“‘ಶುದ್ಧ ಪಶುವಿನಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಯೆಹೋವನದಾಗಿರುವುದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಬಾರದು; ಹೋರಿಯಾಗಿದ್ದರೂ, ಆಡು ಅಥವಾ ಕುರಿಯಾಗಿದ್ದರೂ ಅದು ಯೆಹೋವನ ಸೊತ್ತೇ.


ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.


ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಯೆಹೋವನು ಮೋಶೆಯ ಸಂಗಡ ಮಾತನಾಡಿ,


“ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?


ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು