ವಿಮೋಚನಕಾಂಡ 13:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.