ವಿಮೋಚನಕಾಂಡ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು. ಅಧ್ಯಾಯವನ್ನು ನೋಡಿ |