ವಿಮೋಚನಕಾಂಡ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾವು ಐಗುಪ್ತದೇಶದಲ್ಲಿದ್ದಾಗಲೇ - ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು ಎಂಬದಾಗಿ ನಿನಗೆ ಹೇಳಲಿಲ್ಲವೇ? ನಾವು ಅರಣ್ಯದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವದೇ ವಾಸಿಯಲ್ಲವೇ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವು ನಿನಗೆ ಈಜಿಪ್ಟಿನಲ್ಲೇ, ‘ದಯಮಾಡಿ ನಮ್ಮ ಗೊಡವೆಗೆ ಬರಬೇಡ. ನಾವು ಇಲ್ಲಿದ್ದುಕೊಂಡು ಈಜಿಪ್ಟಿನವರ ಸೇವೆಮಾಡಲು ಬಿಡು’ ಎಂದು ಹೇಳಿದ್ದೆವು. ನಾವು ಇಲ್ಲಿಗೆ ಬಂದು ಅರಣ್ಯದಲ್ಲಿ ಸಾಯುವುದಕ್ಕಿಂತ, ಅಲ್ಲೇ ಗುಲಾಮರಾಗಿ ಇದ್ದಿದ್ದರೆ ಒಳ್ಳೆಯದಾಗಿರುತ್ತಿತ್ತು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾವು ಈಜಿಪ್ಟ್ ದೇಶದಲ್ಲಿದ್ದಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ, ನಾವು ಈಜಿಪ್ಟಿನವರಿಗೆ ಸೇವೆಮಾಡುತ್ತೇವೆ,’ ಎಂದು ನಿನಗೆ ಹೇಳಲಿಲ್ಲವೇ? ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಸೇವೆ ಮಾಡುವುದೇ ಒಳ್ಳೆಯದಾಗಿತ್ತಲ್ಲಾ?” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |