Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:13
36 ತಿಳಿವುಗಳ ಹೋಲಿಕೆ  

ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.


ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.


ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,


ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ! ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ, ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.


ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.


ನಾನೇ, ನಾನೇ ಯೆಹೋವನು, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


“ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.


ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.


ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. ಸೆಲಾ.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;


ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, “ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.


ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು.


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.


ಅದಕ್ಕೆ ಮೋಶೆಯು ಜನರಿಗೆ, “ಭಯಪಡಬೇಡಿರಿ, ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ, ನೀವು ಪಾಪ ಮಾಡದಂತೆ ಆತನ ಮೇಲಿನ ಭಯವು ನಿಮಗೆ ಇರಬೇಕೆಂತಲೂ ಇಳಿದು ಬಂದಿದ್ದಾನೆ” ಎಂದನು.


ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.


ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.


‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು, “ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿಮಿತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು” ಎಂದು ಹೇಳಿದನು.


ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ, ಸ್ವೇಚ್ಛೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ನಿರ್ಮೂಲ ಮಾಡುವನು.


ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;


ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು