Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ನನಗೆ ಮೊರೆಯಿಡುವುದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಸರ್ವೇಶ್ವರ: “ನೀನೇಕೆ ನನಗೆ ಮೊರೆಯಿಡುತ್ತಿರುವೆ? ಮುಂದಕ್ಕೆ ಹೊರಡಬೇಕೆಂದು ಇಸ್ರಯೇಲರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ನನಗೆ ಮೊರೆಯಿಡುವದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲ್ಯರಿಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಯೆಹೋವನು ಮೋಶೆಗೆ, “ನೀನು ನನಗೆ ಮೊರೆಯಿಡುತ್ತಿರುವುದೇಕೆ? ಇಸ್ರೇಲರಿಗೆ ಮುಂದೆ ಹೋಗಲು ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯೆಹೋವ ದೇವರು ಮೋಶೆಗೆ, “ನೀನು ನನಗೆ ಮೊರೆಯಿಡುವುದೇನು? ಇಸ್ರಾಯೇಲರಿಗೆ ಮುಂದಕ್ಕೆ ಹೊರಡಬೇಕೆಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:15
9 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?


ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.


ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು.


ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ” ಎಂದು ಹೇಳಿದನು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು, ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಕೊಂಡು ಹೋಗುವರು.


ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.


ನಿಮ್ಮನ್ನು ಮಹಾಶಕ್ತಿ, ಭುಜಬಲಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನಗೊಬ್ಬನಿಗೇ ಕೈಮುಗಿದು ಯಜ್ಞವರ್ಪಿಸಬೇಕು.


ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು