ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.
“ಫರೋಹನು ನಿಮಗೆ ‘ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕು’ ಎಂದು ಹೇಳಿದರೆ ಮೋಶೆಯು ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಹಾಕು’ ಎಂದು ಹೇಳಬೇಕು. ಅದು ಸರ್ಪವಾಗುವುದು” ಎಂದು ಆಜ್ಞಾಪಿಸಿದನು.
ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.
ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.
ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!