ವಿಮೋಚನಕಾಂಡ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪುಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಹೇಳು. ಅದರ ಎದುರಿಗೆ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಪೀಹಹೀರೋತಿನ ಪೂರ್ವಕಡೆಯಲ್ಲಿ ಪ್ರಯಾಣ ಮಾಡಿ ಬಾಳ್ಚೆಫೋನಿಗೆ ಸಮೀಪದಲ್ಲಿರುವ ಮಿಗ್ದೋಲ್ ಮತ್ತು ಕೆಂಪು ಸಮುದ್ರದ ನಡುವೆ ಇಳಿದುಕೊಳ್ಳಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಲ್ಜೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |