Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿ ಸ್ತಂಭ ಮತ್ತು ಮೇಘ ಸ್ತಂಭದೊಳಗಿನಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅವರಲ್ಲಿ ಗಲಿಬಿಲಿಯನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಬೆಳಗಿನ ಜಾವದಲ್ಲಿ ಯೆಹೋವನು ಆ ಅಗ್ನಿಮೇಘಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬೆಳಗಿನ ಜಾವ ಇನ್ನೂ ಮೊಬ್ಬಿರುವಾಗ, ಯೆಹೋವನು ಎತ್ತರವಾದ ಮೇಘಸ್ತಂಭದಿಂದ ಮತ್ತು ಅಗ್ನಿಸ್ತಂಭದಿಂದ ಈಜಿಪ್ಟಿನ ಸೈನ್ಯವನ್ನು ದೃಷ್ಟಿಸಿದನು. ಆಗ ಯೆಹೋವನು ಅವರ ಮೇಲೆ ಧಾಳಿಮಾಡಿ ಅವರ ಪಾಳೆಯದಲ್ಲಿ ಗಲಿಬಿಲಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:24
16 ತಿಳಿವುಗಳ ಹೋಲಿಕೆ  

ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.


ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ಕ್ಷಣ ಮಾತ್ರದೊಳಗೆ ಸಾಯುವರು; ಮಧ್ಯರಾತ್ರಿಯಲ್ಲೇ ಪ್ರಜೆಗಳು ಕದಲಿ ಇಲ್ಲವಾಗುವರು, ಮನುಷ್ಯನ ಕೈ ಸೋಕದೆ ಬಲಿಷ್ಠರೂ ಅಪಹರಿಸಲ್ಪಡುವರು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂಮಿಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಗುಂಪನ್ನಾಗಿ ಮಾಡಿ ಅಮ್ಮೋನಿಯರ ಪಾಳೆಯದೊಳಗೆ ನುಗ್ಗಿ ಅವರನ್ನು ಮಧ್ಯಾಹ್ನದ ವರೆಗೆ ಹತ್ಯೆಮಾಡಿದನು. ಉಳಿದವರನ್ನು ಒಟ್ಟಾಗಿ ಸೇರಿಸಿಕೊಳ್ಳದ ಹಾಗೆ ಚದರಿಸಿಬಿಟ್ಟನು.


ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.


ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.


ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು