Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಳ್ಳಲು ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ಹಗಲಿನ ಬೆಳಕು ಪ್ರಕಾಶಿಸುವುದಕ್ಕಿಂತ ಸ್ವಲ್ಪ ಮೊದಲು, ಮೋಶೆಯು ತನ್ನ ಕೈಯನ್ನು ಸಮುದ್ರದ ಮೇಲೆ ಚಾಚಿದನು. ನೀರು ತನ್ನ ಸರಿಯಾದ ಮಟ್ಟಕ್ಕೆ ಹಿಂತಿರುಗಿತು. ಈಜಿಪ್ಟಿನವರು ನೀರಿನಿಂದ ಓಡಿಹೋಗಲು ಬಹಳವಾಗಿ ಪ್ರಯತ್ನಿಸಿದರು. ಆದರೆ ಯೆಹೋವನು ಈಜಿಪ್ಟಿನವರನ್ನು ಸಮುದ್ರದಲ್ಲಿ ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ಮೊದಲಿನಂತೆ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಯೆಹೋವ ದೇವರು ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:27
12 ತಿಳಿವುಗಳ ಹೋಲಿಕೆ  

ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.


ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;


ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು.


ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,


ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.


ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.


ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿಬಿಟ್ಟನು, ಆತನ ಪ್ರೀತಿಯು ಶಾಶ್ವತವಾದದ್ದು.


ಸೇನಾಧೀಶ್ವರನಾದ ಯೆಹೋವನು ಓರೇಬ ಬಂಡೆಯ ಹತ್ತಿರ ಮಿದ್ಯಾನ್ಯರನ್ನು ಹತಮಾಡಿದಂತೆ, ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತರ ಮೇಲೆ ಎತ್ತಿದಂತೆ ಎತ್ತುವನು.


ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು