Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:4
36 ತಿಳಿವುಗಳ ಹೋಲಿಕೆ  

ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು.


“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.


ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಐಗುಪ್ತ್ಯರು ಗರ್ವಿಗಳಾಗಿ ನಮ್ಮ ಪೂರ್ವಿಕರನ್ನು ಕುಗ್ಗಿಸಿದಾಗ, ನೀನು ಫರೋಹನಲ್ಲಿಯೂ, ಅವನ ಸೇವಕರಲ್ಲಿಯು, ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನು ನಡೆಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿಕೊಂಡಿರುವೆ.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.


ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.


ಫರೋಹನು ಅದನ್ನು ಕಂಡು ಇಸ್ರಾಯೇಲರನ್ನು ಕುರಿತು, ‘ಅವರಿಗೆ ದಾರಿತಪ್ಪಿದೆ, ಎಲ್ಲಾ ಕಡೆಯಲ್ಲಿಯೂ ಮರುಭೂಮಿ ಅವರನ್ನು ಸುತ್ತುವರಿದಿದೆ’ ಎಂದು ಅಂದುಕೊಳ್ಳುವನು.


ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.


ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.


ಯೆಹೋವನು ಅವರ ರಥಗಳ ಚಕ್ರದ ಕೀಲುಗಳಲ್ಲಿ ವ್ಯತ್ಯಾಸ ಮಾಡಿಬಿಟ್ಟದ್ದರಿಂದ ಐಗುಪ್ತರು ಬಹು ಕಷ್ಟದಿಂದ ರಥಗಳನ್ನು ಸಾಗಿಸಿಕೊಂಡು ಹೋಗಬೇಕಾಯಿತು. ಆಗ ಐಗುಪ್ತ್ಯರು, “ನಾವು ಇಸ್ರಾಯೇಲರ ಮುಂದೆ ನಿಲ್ಲಲಾರೆವು, ಓಡಿ ಹೋಗೋಣ, ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಿದ್ದಾನೆ” ಎಂದು ಹೇಳಿಕೊಂಡರು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


“ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ಇಸ್ರಾಯೇಲರು ತಮ್ಮ ಮಕ್ಕಳಿಗೂ, ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡೆಸಿರುವ ಈ ಮಹತ್ಕಾರ್ಯಗಳನ್ನು ವಿವರಿಸಿ ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದ ಹಾಗೆ ಶಿಕ್ಷಿಸಿದನು ಎಂಬುದಾಗಿ ತಿಳಿಸಬೇಕು. ಹೀಗೆ ನಾನು ಫರೋಹನ ಹೃದಯವನ್ನು, ಅವನ ಪರಿವಾರದವರ ಹೃದಯಗಳನ್ನೂ ಕಠಿಣಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದನು.


ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು