ವಿಮೋಚನಕಾಂಡ 14:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇಸ್ರೇಲರು ತಪ್ಪಿಸಿಕೊಂಡರೆಂಬ ವರದಿಯನ್ನು ಕೇಳಿದಾಗ, ಫರೋಹನ ಮತ್ತು ಅವನ ಅಧಿಕಾರಿಗಳ ಮನಸ್ಸುಗಳು ಬದಲಾದವು. ಫರೋಹನು, “ಇಸ್ರೇಲರನ್ನು ನಾವು ಯಾಕೆ ಹೋಗಲು ಬಿಟ್ಟೆವು? ಅಯ್ಯೋ, ನಾವೀಗ ನಮ್ಮ ಗುಲಾಮರನ್ನು ಕಳೆದುಕೊಂಡೆವಲ್ಲಾ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು. ಅಧ್ಯಾಯವನ್ನು ನೋಡಿ |