Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಶ್ರೇಷ್ಠವಾದ ಆರುನೂರು ರಥಗಳನ್ನೂ ಐಗುಪ್ತದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಹೋದನು. ಆ ಎಲ್ಲಾ ರಥಗಳಲ್ಲಿ ಭಟರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫರೋಹನು ತನ್ನ ಆರುನೂರು ರಥಗಳನ್ನೂ ಅವುಗಳ ಚಾಲಕರನ್ನೂ ಮತ್ತು ಅವುಗಳೊಡನೆ ಈಜಿಪ್ಟಿನ ಇತರ ರಥಗಳನ್ನೂ ತೆಗೆದುಕೊಂಡನು. ಪ್ರತಿಯೊಂದು ರಥದಲ್ಲಿ ಒಬ್ಬ ದಳಪತಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವನು ಆರಿಸಿಕೊಂಡ ಅತ್ಯುತ್ತಮ ಆರುನೂರು ರಥಗಳನ್ನೂ, ಈಜಿಪ್ಟಿನ ಎಲ್ಲಾ ರಥಗಳನ್ನೂ, ಅವುಗಳ ಮೇಲೆ ಅಧಿಪತಿಗಳನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:7
11 ತಿಳಿವುಗಳ ಹೋಲಿಕೆ  

ಆತನು ಫರೋಹನ ರಥಗಳನ್ನೂ, ಸ್ಯೆನಿಕರನ್ನೂ ಸಮುದ್ರದಲ್ಲಿ ಕೆಡವಿಹಾಕಿದನು. ಫರೋಹನ ಶ್ರೇಷ್ಠ ವೀರರನ್ನು ಕೆಂಪುಸಮುದ್ರದಲ್ಲಿ ಮುಳುಗಿಸಿ ಬಿಟ್ಟನು.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ, ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಯೆಹೋವನು ಸೀಸೆರನನ್ನು ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಗೊಳಿಸಿ, ಕತ್ತಿಗೆ ತುತ್ತಾಗಿಸಿದನು. ಸೀಸೆರನು ರಥದಿಂದ ಇಳಿದು ಓಡಿಹೋದನು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.


ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.


ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.


ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು