Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:8
21 ತಿಳಿವುಗಳ ಹೋಲಿಕೆ  

“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.


ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.


ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.


ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.


ಆದರೆ ಅವರ ವಿರೋಧಿಗಳ ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು, ‘ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಳ್ಳುವರು’ ಎಂದು ನಾನು ಹಿಂದೆಗೆದೆನು” ಎಂಬುದೇ.


ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.


ಆದರೂ ಯೆಹೋವನು ಮೋಶೆಗೆ ಹೇಳಿದಂತೆಯೇ ಆಯಿತು. ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.


ಶ್ರೇಷ್ಠವಾದ ಆರುನೂರು ರಥಗಳನ್ನೂ, ಐಗುಪ್ತ ದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಬೆನ್ನಟ್ಟಿ ಹೋದನು. ಆ ಎಲ್ಲಾ ರಥಗಳಲ್ಲಿ ಅಧಿಪತಿಗಳನ್ನೂ ಕರೆಸಿ ಕೊಂಡನು.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.


ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ಅವರ ಮನಸ್ಸಿನಲ್ಲಿ ಭಯಹುಟ್ಟಿಸುವಿ, ನಿನ್ನ ಶಾಪವು ಅವರ ಮೇಲಿರಲಿ!


ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.


ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು