Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ, ರಥಗಳೂ, ಅವನ ರಾಹುತರೂ, ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುತ್ತಿರುವಾಗಲೇ ಅವರ ಸಮೀಪಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸಮೀಪಕ್ಕೆ ಬಂದರು; ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಐಗುಪ್ತ್ಯರು ಅಂದರೆ ಫರೋಹನ ಕುದುರೆಗಳೂ ರಥಗಳೂ ಅವನ ರಾಹುತರೂ ಸೈನ್ಯದವರೆಲ್ಲರೂ ಅವರ ಹಿಂದೆ ಹೊರಟು ಇಸ್ರಾಯೇಲ್ಯರು ಪೀಹಹೀರೋತಿನ ಹತ್ತಿರ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈಜಿಪ್ಟಿನ ಸೈನ್ಯದಲ್ಲಿ ಅನೇಕ ರಾಹುತರು ಇದ್ದರು; ರಥಗಳೂ ಇದ್ದವು. ಅವರು ಇಸ್ರೇಲರನ್ನು ಬೆನ್ನಟ್ಟಿದರು. ಇಸ್ರೇಲರು ಪೀಹಹೀರೋತಿನ ಹತ್ತಿರವಿರುವ ಬಾಳ್ಚೆಫೋನಿನ ಎದುರಾಗಿ ಸಮುದ್ರತೀರದಲ್ಲಿ ಇಳಿದುಕೊಳ್ಳುವಾಗಲೇ ಈಜಿಪ್ಟಿನ ಸೈನ್ಯದವರು ಅವರ ಹತ್ತಿರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಜಿಪ್ಟಿನವರು ಅವರನ್ನು ಹಿಂದಟ್ಟಿದರು. ಅವರು ಸಮುದ್ರ ತೀರದಲ್ಲಿ ಇಳಿದುಕೊಂಡಿರುವಾಗ, ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸಮೀಪದಲ್ಲಿ ಬಾಲ್ಜೆಫೋನಿನ ಎದುರಾಗಿ ಇಸ್ರಾಯೇಲರನ್ನು ಸಮೀಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:9
5 ತಿಳಿವುಗಳ ಹೋಲಿಕೆ  

ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.


“ಇಸ್ರಾಯೇಲರು ಹಿಂದಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪು ಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿಯೇ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.


ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.


ಏತಾಮಿನಿಂದ ಹೊರಟು ಬಾಳ್ಚೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಪೂರ್ವದಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು