Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಮೋಶೆಯೂ, ಇಸ್ರಾಯೇಲರೂ ಯೆಹೋವನನ್ನು ಸ್ತುತಿಸುವುದಕ್ಕಾಗಿ ಈ ಕೀರ್ತನೆಯನ್ನು ಹಾಡಿದರು: “ಯೆಹೋವನಿಗೆ ಸ್ತೋತ್ರ ಗಾನಮಾಡೋಣ; ಆತನು ಮಹಾಜಯಶಾಲಿಯಾದವನು. ಕುದುರೆಗಳನ್ನು ಮತ್ತು ರಾಹುತರನ್ನು ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಮೋಶೆಯೂ ಇಸ್ರಾಯೇಲ್ಯರೂ ಯೆಹೋವನ ಸ್ತೋತ್ರಕ್ಕಾಗಿ ಈ ಕೀರ್ತನೆಯನ್ನು ಹಾಡಿದರು - ಯೆಹೋವನ ಸ್ತೋತ್ರವನ್ನು ಗಾನ ಮಾಡೋಣ; ಆತನು ಮಹಾ ಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿನಾಶ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನು ಕುದುರೆಗಳನ್ನೂ ಸವಾರರನ್ನೂ ಸಮುದ್ರದೊಳಗೆ ಮುಳುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:1
27 ತಿಳಿವುಗಳ ಹೋಲಿಕೆ  

ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”


ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.


ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ಮೋಶೆ ಸಮುದ್ರದ ಮೇಲೆ ಕೈಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಐಗುಪ್ತ್ಯರು ಓಡಿಹೋಗುತ್ತಾ ಅದರ ಎದುರಾಗಿಯೇ ಬಂದರು. ಹೀಗೆ ಯೆಹೋವನು ಐಗುಪ್ತ್ಯರನ್ನು ಸಮುದ್ರದೊಳಗೆ ತಳ್ಳಿಬಿಟ್ಟನು.


ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿ


ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.


ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.


ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ


ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.


ತನ್ನ ಪ್ರಜೆಯು ಉಲ್ಲಾಸದಿಂದಲೂ, ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.


ಕೆಟ್ಟವನ ದುರ್ಮಾರ್ಗದಲ್ಲಿ ಉರುಲುಂಟು, ಒಳ್ಳೆಯವನು ಉಲ್ಲಾಸಗೊಂಡು ಹರ್ಷಧ್ವನಿಗೈಯುವನು.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ನಿನ್ನಿಂದ ರಾಜ್ಯಗಳನ್ನು ಅಳಿಸುತ್ತೇನೆ; ನಿನ್ನಿಂದ ಕುದುರೆಯನ್ನೂ ಮತ್ತು ಸವಾರನನ್ನೂ ಅಳಿಸಿಬಿಡುತ್ತೇನೆ; ನಿನ್ನಿಂದ ರಥವನ್ನೂ, ಸಾರಥಿಯನ್ನೂ ನಾಶಮಾಡುತ್ತೇನೆ;


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ಅಷ್ಟರಲ್ಲಿ ಯೆಹೋವನು ಮೋಶೆಗೆ, “ಸಮುದ್ರದ ಮೇಲೆ ನಿನ್ನ ಕೈಚಾಚು, ಆಗ ಅದರ ನೀರು ಮೊದಲಿನಂತೆ ಬಂದು ಐಗುಪ್ತ್ಯರನ್ನೂ, ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು” ಎಂದು ಹೇಳಿದನು.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು