Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:15
24 ತಿಳಿವುಗಳ ಹೋಲಿಕೆ  

ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಸ್ಥಳ, ಕುಲ, ಹೆಸರುಗಳ ಪ್ರಕಾರವಾಗಿ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವುವೆಂದರೆ: ತಿಮ್ನ, ಅಲ್ವಾ, ಯೆತೇತ,


ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.


ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ, ‘ಕೆಟ್ಟ ವಾರ್ತೆಯ ನಿಮಿತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವುದು; ಎಲ್ಲರ ಕೈ ಜೋಲು ಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವುದು; ಇಗೋ, ಬಂದಿತು, ಬಂದಾಯಿತು’ ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.”


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಆದುದರಿಂದ ಎಲ್ಲರ ಕೈಗಳು ಜೋಲು ಬೀಳುವುದು. ಎಲ್ಲರ ಹೃದಯವು ಕರಗಿ ನೀರಾಗುವುದು.


ಹೊಗೆಯು ಗಾಳಿಯಿಂದ ಹೇಗೋ, ಹಾಗೆ ಅವರು ಆತನಿಂದ ಹಾರಿಹೋಗಲಿ; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ, ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗಲಿ.


ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗುಂದಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿ ಯಥಾರ್ಥವಾಗಿ ಆತನನ್ನೇ ಅನುಸರಿಸಿದೆ.


ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.


ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.


ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾದ ಎಲೀಫಜನಿಂದ ಹುಟ್ಟಿದವರು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಕೆನೆಜ್,


ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.


ದಮಸ್ಕವನ್ನು ಕುರಿತದ್ದು, “ಹಮಾತಿಗೂ ಮತ್ತು ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭ ಸಮಾಚಾರವನ್ನು ಕೇಳಿ ಕರಗಿ ಹೋಗಿವೆ; ಸಮುದ್ರಕ್ಕೆ ತಲ್ಲಣ ಹತ್ತಿದೆ, ಸುಮ್ಮನಿರಲಾರದು.


ಕೋರಹ, ಗತಾಮ್, ಅಮಾಲೇಕ್, ಇವರೇ, ಈ ಕುಲಪತಿಗಳು ಎದೋಮ್ಯರ ದೇಶದಲ್ಲಿದ್ದ ಎಲೀಫಜನಿಂದ ಬಂದವರು. ಇವರು ಆದಾಳ ಮೊಮ್ಮಕ್ಕಳು.


ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು