Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭಯವೂ, ಹೆದರಿಕೆಯೂ, ಅವರಿಗುಂಟಾಗುವುದು. ನಿನ್ನ ಭುಜಬಲದ ಶಕ್ತಿಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ಅಷ್ಟರಲ್ಲಿ ಯೆಹೋವನೇ, ನೀನು ಕಾಪಾಡಿದ ನಿನ್ನ ಪ್ರಜೆಗಳು ದಾಟಿ ಹೋಗಿ ದೇಶವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:16
34 ತಿಳಿವುಗಳ ಹೋಲಿಕೆ  

ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡುಗಡೆ ಮಾಡಿ ಸಂಪಾದಿಸಿಕೊಂಡ ನಿನ್ನ ಸಭಾಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್ ಪರ್ವತವನ್ನು ಮರೆಯಬೇಡ.


ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು.


ಮರುದಿನ ಬೆಳಿಗ್ಗೆ ಅಮಲಿಳಿದ ನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ, ಅವನ ಹೃದಯವೇ ನಿಂತಂತೆ ಆಯಿತು. ಅವನು ಸ್ತಬ್ಧನಾದನು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಅವರಿಗಿಂತ ಬಲಿಷ್ಠರ ಕೈಯಿಂದ ಅವರನ್ನು ಬಿಡಿಸಿದ್ದಾನಷ್ಟೆ.


ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.


ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’


ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಸಮುದ್ರವನ್ನೂ, ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತ ಜನರು ಹಾದುಹೋಗುವುದಕ್ಕೆ, ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದವನು ನೀನಲ್ಲವೋ?


ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


“ಆತನು ತನ್ನ ನಂಬಿಗಸ್ತ ಭಕ್ತರ ಹೆಜ್ಜೆಗಳನ್ನು ಕಾಯುವನು; ಆದರೆ ದುಷ್ಟರನ್ನು ಅಂಧಕಾರದ ಮೌನದಲ್ಲಿ ಮುಳುಗಿಸುವನು, ಭುಜಬಲದಿಂದಲೇ ಯಾವನೂ ಜಯಹೊಂದಲಾರನು.


ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.


ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.


ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು.


ಆಮೇಲೆ ಅವರು ಪ್ರಯಾಣ ಮಾಡುತ್ತಿರುವಾಗ, ಸುತ್ತಲಿರುವ ಊರುಗಳಲ್ಲಿ ದೇವರ ಭಯವು ಇದ್ದುದರಿಂದ ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.


ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.


ಯೆಹೋವನೇ, ನಿನ್ನ ಬಲಗೈಯಲ್ಲಿರುವ ಶಕ್ತಿ ಎಷ್ಟೋ ಮಹಿಮೆಯುಳ್ಳದ್ದಾಗಿದೆ. ಯೆಹೋವನೇ, ನಿನ್ನ ಬಲಗೈ ಶತ್ರುಗಳನ್ನು ಪುಡಿಪುಡಿಮಾಡಿಬಿಡುತ್ತದೆ.


ನಿನ್ನ ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ನೀನು ನಿನ್ನ ಪ್ರಜೆಯನ್ನು ಬಿಡುಗಡೆ ಮಾಡಿರುವೆ. ನಿನ್ನ ಶಕ್ತಿಯಿಂದ ಅವರನ್ನು ನೀನು ವಾಸಮಾಡುವ ಪರಿಶುದ್ಧ ನಿವಾಸಕ್ಕೆ ನಡೆಸಿರುವೆ.


ಆ ನಂತರ ಮೋಶೆಯು ಯೆಹೋವನು ಇಸ್ರಾಯೇಲರ ಪರವಾಗಿ ಫರೋಹನಿಗೂ, ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ, ದಾರಿಯಲ್ಲಿ ತಮಗುಂಟಾದ ಎಲ್ಲಾ ಕಷ್ಟಗಳನ್ನೂ, ಯೆಹೋವನು ಆ ಕಷ್ಟಗಳಿಂದ ತಪ್ಪಿಸಿದ್ದನ್ನೂ ತನ್ನ ಮಾವನಿಗೆ ವಿವರಿಸಿದನು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಇಗೋ ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೂ, ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆತರುವುದಕ್ಕೂ ದೂತನನ್ನು ನಿಮ್ಮ ಮುಂದಾಗಿ ಕಳುಹಿಸಿದ್ದೇನೆ.


ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.


ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ನೀವು ಆತನ ಮಾತುಗಳನ್ನು ಶ್ರದ್ಧೆಯಿಂದ ಆಲಿಸಿ ನನ್ನ ಆಜ್ಞೆಗಳ ಪ್ರಕಾರ ನಡೆದುಕೊಂಡರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ, ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು